ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗುತ್ತದೆ ನೋಡ್ತಾಯಿರಿ : ಯಡಿಯೂರಪ್ಪ

ಧಾರವಾಡ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ಸಂಸತ್‌ ಅಧಿವೇಶನದ ವೇಳೆ ಕಾಂಗ್ರೆಸ್‌ ಅಡ್ಡಿಪಡಿಸಿ ದೇಶದ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪವಾಸ ಸತ್ಯಾಗ್ರಹದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ಅಭಿವೃದ್ಧಿ ವಿರೋಧಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಪ್ರಧಾನಿ ರಾಹುಲ್‌ ಗಾಂಧಿ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಕಾಂಗ್ರೆಸ್‌ ಸ್ಥಿತಿ ಏನಾಗುತ್ತದೆ ನೋಡ್ತಾಯಿರಿ ಎಂದಿದ್ದಾರೆ. ಇದೇ ವೇಳೆ, ವಿದ್ಯಾವಂತರು ಬಿಜೆಪಿಗೆ ಮತಹಾಕಬೇಕು ಎಂದಿರುವ ಬಿಎಸ್‌ವೈ, ಈ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಗೆದ್ದು ತೋರಿಸಲಿ. ತವರಿನಲ್ಲೇ ಸಿದ್ದರಾಮಯ್ಯಂಗೆ ಈ ಗತಿಯಾಗಿದೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com