IPL : ಕಾವೇರಿ ಪ್ರತಿಭಟನೆ ಹಿನ್ನೆಲೆ : CSK ಪಂದ್ಯಗಳು ಚೆನ್ನೈನಿಂದ ಪುಣೆಗೆ ಸ್ಥಳಾಂತರ

ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಂಗಳವಾರದ ಪಂದ್ಯಕ್ಕೆ ಅಡ್ಡಿ ಪಡಿಸಿದ್ದರು. ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಆಟಗಾರರತ್ತ ಶೂ ಎಸೆಯಲಾಗಿತ್ತು.

ಈ ಎಲ್ಲ ಕಹಿ ಘಟನೆಗಳ ಹಿನ್ನೆಲೆಯಲ್ಲಿ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಮುಂದಿನ ಎಲ್ಲ ಐಪಿಎಲ್ ಪಂದ್ಯಗಳನ್ನು ಪುಣೆಗೆ ಸ್ಥಳಾಂತರಿಸಲಾಗಿದೆ.

Image result for CSK matches shifted IPL

‘ ಚೆನ್ನೈ ನಲ್ಲಿ ಆಯೋಜನೆಗೊಂಡಿದ್ದ ತವರಿನ ಪಂದ್ಯಗಳನ್ನು ಪುಣೆಗೆ ಸ್ಥಳಾಂತರಿಸುವಂತೆ CSK ತಂಡಕ್ಕೆ ನಿರ್ದೇಶನ ನೀಡಲಾಗುವುದು. ಕಾವೇರಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಕಾರಣದಿಂದ ಆಟಗಾರರಿಗೆ ಸೂಕ್ತ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಚೆನ್ನೈ ಪೋಲೀಸರು ಹೇಳಿದ್ದರಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ ‘ ಎಂದು ಐಪಿಎಲ್ ಚೇರ್ಮನ್ ರಾಜೀವ್ ಶುಕ್ಲಾ ಬುಧವಾರ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com