ಚುನಾವಣೆಗೂ ಮುನ್ನವೇ ಬಿಜೆಪಿಗೆ ಗೆಲುವಿನ ಸಂದೇಶ ರವಾನೆಯಾಗುತ್ತಿದೆ : ಅಮಿತ್ ಶಾ

ಬೆಳಗಾವಿ : ಮೀಸೆ ಮೇಲೆ ಕೈಹಾಕಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಆಕ್ರೋಶಕ್ಕೆ
ಹೆದರಿ ಮೈಸೂರಿನ ಚಾಮುಂಡಿ ಕ್ಷೇತ್ರವನ್ನು ಬದಲಾಯಿಸಿ ಬೇರೆ ಕ್ಷೇತ್ರವನ್ನು ಹುಡುಕಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಶುಕ್ರವಾರ ಕಿತ್ತೂರಿನ ಚನ್ನಮ್ಮಳ ಮೂರ್ತಿಗೆ ಮಾಲಾರ್ಪಣೆ ಮಾಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ಸರಕಾರದ ಮೇಲೆ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಾನು ಪ್ರವಾಸ ಮಾಡಿದ ಕಡೆಗಳಲ್ಲಿ ಸಿದ್ದರಾಮಯ್ಯನವರ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಜನತೆ ಯಡಿಯೂರಪ್ಪನವರ ಮೇಲೆ ಪ್ರೀತಿ ತೋರುತ್ತಿದ್ದಾರೆ. ಚುನಾವಣೆಯ ಮುನ್ನವೇ ರಾಜ್ಯದ ಜನತೆ ಬಿಜೆಪಿಗೆ ಗೆಲುವಿಗೆ ಸಂದೇಶ ನೀಡುತ್ತಿರುವುದಾಗಿ ಹೇಳಿದ್ದಾರೆ.

ಈ ಸಲ ಪ್ರಚಂಡ ಬಹುಮತದಿಂದ ಕನಾ೯ಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸಮ್ಮುಖದಲ್ಲಿ ಕನಾ೯ಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲಾಗುವುದು ಎಂದರು. ಜೀವನದಲ್ಲಿ ಇದೇ ಮೊದಲ ಬಾರಿಗೆ ಕಿತ್ತೂರಿನ ನಾಡಿಗೆ ಆಗಿಮಿಸಿದ್ದೇನೆ. 1857ರ ಕ್ರಾಂತಿಗೂ ಮುನ್ನ.,ಸ್ವಾತಂತ್ರ್ಯದ ಹೋರಾಟದ ಕಿಚ್ಚನ್ನು ಹಚ್ಚಿದ್ದವಳು ವೀರರಾಣಿ ಕಿತ್ತೂರು ಚೆನ್ನಮ್ಮ.
ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನವೂ ಆಗಿರುವುದು ಇತಿಹಾಸವಾಗಿದೆ ಎಂದರು.

2 thoughts on “ಚುನಾವಣೆಗೂ ಮುನ್ನವೇ ಬಿಜೆಪಿಗೆ ಗೆಲುವಿನ ಸಂದೇಶ ರವಾನೆಯಾಗುತ್ತಿದೆ : ಅಮಿತ್ ಶಾ

Leave a Reply

Your email address will not be published.

Social Media Auto Publish Powered By : XYZScripts.com