CWG 2018 : ಫ್ರೀಸ್ಟೈಲ್ ಕುಸ್ತಿ : ಭಜರಂಗ್ ಪೂನಿಯಾಗೆ ಚಿನ್ನ : ಬೆಳ್ಳಿ ಜಯಿಸಿದ ಪೂಜಾ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಗರದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ ಪದಕಗಳು ಲಭಿಸಿವೆ. ಶುಕ್ರವಾರ ನಡೆದ ಪುರುಷರ 57 ಕೆ.ಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಕುಸ್ತಿ ಪಟು ಭಜರಂಗ್ ಪೂನಿಯಾ ಬಂಗಾರದ ಪದಕವನ್ನು ಜಯಿಸಿದ್ದಾರೆ.

ಮಹಿಳೆಯರ 57 ಕೆ.ಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಪೂಜಾ ಧಂಡಾ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಮತ್ತೋರ್ವ ಭಾರತೀಯ ಮಹಿಳಾ ಕುಸ್ತಿ ಪಟು ದಿವ್ಯಾ ಕಕ್ರನ್, ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತದ ಖಾತೆಯಲ್ಲಿ ಸದ್ಯ 17 ಚಿನ್ನ, 10 ಬೆಳ್ಳಿ ಹಾಗೂ 12 ಕಂಚಿನ ಪದಕಗಳು ಇವೆ.

Leave a Reply

Your email address will not be published.

Social Media Auto Publish Powered By : XYZScripts.com