ನಾಲ್ಕಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ : ಒಂದೇ ಕುಟುಂಬದ ನಾಲ್ವರ ಸಜೀವ ದಹನ

ದೆಹಲಿ : ನಗರದಲ್ಲಿ ಭಾರೀ ಅಗ್ನಿ ಅವಗಢ ಸಂಭವಿಸಿದ್ದು ಈ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.

ದೆಹಲಿಯ ಕೊಹಾತ್‌ ಎನ್‌ಕ್ಲೇವ್‌ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಮುಂಜಾನೆ ಶಾರ್ಕ್‌ ಸರ್ಕ್ಯೂಟ್‌ನಿಂದಾಗಿ ಅವಗಡ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಮೂರು ಹಾಗೂ 7 ವರ್ಷದ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಪಾರ್ಕ್‌ ಮಾಡಿದ್ದ ಐದು ವಾಹನಗಳು ಸುಟ್ಟು ಕರಕಲಾಗಿವೆ. ಕಟ್ಟಡದ ಕೋಣೆಯೊಂದರಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಕಟ್ಟಡವನ್ನೇ ಆವರಿಸಿದೆ. ಕೋಣೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ  ಬರುವಷ್ಟರಲ್ಲಿ ಬೆಂಕಿ ನಾಲ್ವರನ್ನು ಬಲಿತೆಗೆದುಕೊಂಡಿದೆ.

ಲಜ್‌ಪತ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com