ಚಿತ್ರದುರ್ಗ : ಕಾರು-ಲಾರಿ ನಡುವೆ ಭೀಕರ ಅಪಘಾತ, ಇಬ್ಬರ ದುರ್ಮರಣ..

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಯರಬಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಯರಬಳ್ಳಿ ಗ್ರಾಮದ ಹತ್ತಿರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ತುಮಕೂರು ಮೂಲದವರಾಗಿದ್ದಾರೆ.

ಮೃತರಾದ ಅಕ್ಮಲ್ ಪಾಷಾ(32) ಹಾಗೂ ಶಬನಾ ಅಫೀಜ್ (30) ಬಳ್ಳಾರಿಯಿಂದ ತುಮಕೂರಿಗೆ ಹೋಗುತ್ತಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com