ರಾಯಚೂರಿನಲ್ಲಿ ಮಧ್ಯರಾತ್ರಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ರಾಯಚೂರಿನಲ್ಲಿ ಮಧ್ಯರಾತ್ರಿ ಆಚರಿಸಲಾಯಿತು. ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ದಲಿತ ಮುಖಂಡ ರಾಮಕೃಷ್ಣ ನೇತೃತ್ವದಲ್ಲಿ ಹಲವಾರು ಯುವಕರು ಭಾಗಿಯಾಗಿ ಅಂಬೇಡ್ಕರ್ ಜಯಂತಿ ಆಚರಿಸಿದರು. ಮಧ್ಯರಾತ್ರಿ 12 ಗಂಟೆಯ ನಂತರ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಯುವಕರು ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಇಂದು ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಬಾಬಾ ಸಾಹೇಬರ ಪ್ರತಿಮೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com