ಉನ್ನಾವ್ & ಕಠುವಾ ಅತ್ಯಾಚಾರ ಪ್ರಕರಣ : ಕೃತ್ಯ ಖಂಡಿಸಿ ದೇಶಾದ್ಯಂತ ಪ್ರತಿಭಟನೆ

ಉನ್ನಾವ್ ಹಾಗೂ ಕಠುವಾ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ದೇಶಾದ್ಯಂತ ಆಕ್ರೋಶ ಭರಿತ ಪ್ರತಿಭಟನೆ ಜರುಗಿತು. ದೆಹಲಿ, ಮುಂಬೈ, ಬೆಂಗಳೂರು, ಗೋವಾ, ಭೋಪಾಲ್ ಸೇರಿದಂತೆ ಕೇರಳ ರಾಜ್ಯದ ಕೆಲವೆಡೆ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

ದೇಶದ ಪ್ರಮುಖ ನಗರಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಮಾನವ ಸರಪಳಿಯನ್ನು ನಿರ್ಮಿಸಿ, ಕೈಯಲ್ಲಿ ಫಲಕಗಳನ್ನು ಹಿಡಿದು ಧಿಕ್ಕಾರ ಕೂಗಿದರು. ಚಿತ್ರರಂಗದ ಹಲವು ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಬಿಜೆಪಿ ಶಾಸಕನಿಂದ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿತ್ತು. ಶಾಸಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದಾದ ಬಳಿಕ ಜಮ್ಮು ಕಾಶ್ಮೀರದ ಕಠುವಾದಲ್ಲಿ ಆಸಿಫಾ ಎಂಬ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಲಾಗಿತ್ತು.

 

 

Leave a Reply

Your email address will not be published.

Social Media Auto Publish Powered By : XYZScripts.com