ಟಿಕೆಟ್‌ ಕೈ ತಪ್ಪಿದ್ದಕ್ಕೆ CM ಸಮ್ಮುಖದಲ್ಲೇ ಹೈಕಮಾಂಡ್‌ಗೆ ಸವಾಲೆಸೆದ ಕೈ ಬಂಡಾಯ ಅಭ್ಯರ್ಥಿ!

ಬೆಂಗಳೂರು : ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಟಿಕೆಟ್ ಪಡೆಯಲು ಹಣಾಹಣಿ ನಡೆಸಿದ್ದಾರೆ. ಈ ಮಧ್ಯೆ ಭಾನುವಾರವಷ್ಟೇ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ಸಿಗದ ಅಭ್ಯರ್ಥಿಗಳು ಬಂಡಾಯವೆದ್ದಿದ್ದಾರೆ.

ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬೇಲೂರು ಕ್ಷೇತ್ರದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿ.ಶಿವರಾಂ ಹಾಗೂ ರುದ್ರೇಶ್‌ ಗೌಡ ಬೆಂಬಲಿಗರ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ.

ಬೇಲೂರು ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಬಿ. ಶಿವರಾಂ ಅವರಿಗೆ ಕೈ ಟಿಕೆಟ್‌ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿದ್ದ ಶಿವರಾಂ ಅವರಿಗೆ ಟಿಕೆಟ್ ನೀಡದೆ ರುದ್ರೇಶಗೌಡರ ನಿಧನದಿಂದಾಗಿ ಅನುಕಂಪದ ಆಧಾರದ ಮೇಲೆ ಕೀರ್ತನ ರುದ್ರೇಶಗೌಡರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್‌ನಿಂದ ಟಿಕೆಟ್‌ ನೀಡದಿದ್ದರೂ ಚುನಾವಣೆಗೆ ಸ್ಪರ್ಧಿಸಿ ಗೆದ್ದು ತೋರಿಸುತ್ತೇನೆ ಎಂದು ಶಿವರಾಂ ಹೈಕಮಾಂಡ್‌ಗೇ ಸವಾಲೆಸೆದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com