ಅತ್ಯಾಚಾರ ವಿರುದ್ಧದ ಪ್ರತಿಭಟನಾ ಮೆರವಣಿಗೆಯಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ !

ಮುಂಬೈ : ಕಥುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ವಿರುದ್ಧ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಮುಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ಈ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಮುಂಬೈನ ಕಾರ್ಟರ್‌ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ಕಾಮುಕ ಮಹಿಳೆಯನ್ನು ನೋಡುತ್ತಾ ಅಶ್ಲೀಲವಾಗಿ ವರ್ತಿಸಿದ್ದಾನೆ. ಅಲ್ಲದೆ ಆಕೆಯ ಹಿಂದೆ ಓಡಿ ಆಕೆಗೆ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದ ಕೂಡಲೆ ಪೊಲೀಸರು ಕಾಮುಕನನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ.

ಬಂಧಿತ ಕಾಮುಕನನ್ನು ರಾಜು ಜಾಧವ್‌ ಎಂದು ಹೆಸರಿಸಲಾಗಿದ್ದು, ಈತ ಕೂಲಿ ಕಾರ್ಮಿಕ ಎಂದು ತಿಳಿದುಬಂದಿದೆ. ಸದ್ಯ ಈತನ ವಿಚಾರಣೆ ನಡೆಸಲಾಗುತ್ತಿದೆ.

ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ದೆಹಲಿಯಲ್ಲಿ ಕಥುವಾ ಹಾಗೂ ಉನ್ನಾವೋ ಪ್ರಕರಣಗಳನ್ನು ಖಂಡಿಸಿ ಮದ್ಯರಾತ್ರಿ ಕ್ಯಾಂಡಲ್ ಲೈಟ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ವೇಳೆ ರಾಹುಲ್‌ ಸಹೋದರಿ ಪ್ರಿಯಾಂಕಾ ಅವರನ್ನು ಜನ ತಳ್ಳಾಡಿದ್ದು ಸುದ್ದಿಯಾಗಿತ್ತು.

 

Leave a Reply

Your email address will not be published.

Social Media Auto Publish Powered By : XYZScripts.com