ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ : 21 ಮಂದಿ ಜಲಸಮಾಧಿ

ಭೋಪಾಲ್‌ : ನಿಯಂತ್ರಣ ತಪ್ಪಿದ ಲಾರಿಯೊಂದು ನದಿಗೆ ಉರುಳಿದ್ದು, ಘಟನೆಯಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ 20 ಮಂದಿಗೆ ಗಂಭೀರ ಗಾಯಗಳಾರಗಿರುವುದಾಗಿ ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಮೇಲಿಯಾ ಗ್ರಾಮದಲ್ಲಿ ಸೋನ್‌ ನದಿಗೆ ನಿರ್ಮಿಸಲಾಗಿದ್ದ ಸೇತುವೆಯ ಮೇಲೆ ಟ್ರಕ್ ಹೋಗುತ್ತಿತ್ತು.ಯ ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು, 100 ಮೀ ಎತ್ತರ ಮೇಲಿಂದ ನದಿಗೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಲಸಲಾಗಿದೆ.

ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ. ಈ ಘಟನೆಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಘೋಷಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com