ರಕ್ತ ಸಂಬಂಧವನ್ನೂ ನೋಡದ ಕಾಮುಕರು : ಅಪ್ರಾಪ್ತೆ ಮೇಲೆ ತಂದೆ, ಅಣ್ಣನಿಂದಲೇ ಅತ್ಯಾಚಾರ !

ಮಂಡ್ಯ : ಸಕ್ಕರೆ ನಾಡು ಮಂಡ್ಯ ಪೈಶಾಚಿಕ ಕೃತ್ಯವೊಂದಕ್ಕೆ ಸಾಕ್ಷಿಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ತಂದೆ ಹಾಗೂ ಮಗನೇ ಅತ್ಯಾಚಾರ ಮಾಡಿದ್ದಾರೆ.

ಅತ್ಯಾಚಾರಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಮಂಡ್ಯದ ಕೆ.ಆರ್‌ ಪೇಟೆ ತಾಲ್ಲೂಕಿನ  ದೊಡ್ಡ ಕ್ಯಾತನಹಳ್ಳಿ ಗ್ರಾಮದ ರಮೇಶ್‌ (50), ಜಯೇಶ್‌ (26) ಎಂದು ಹೆಸರಿಸಲಾಗಿದೆ.

ಅತ್ಯಾಚಾರಕ್ಕೊಳಗಾದ ಬಾಲಕಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಇಬ್ಬರೂ ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಇದನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಸಿದ್ದರು ಎಂದು ಬಾಲಕಿ ಹೇಳಿದ್ದಾಳೆ.

ಸದ್ಯ ಕೆ.ಆರ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com