ಗೊಂದಲಕ್ಕೆ ತೆರೆ : ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಖಚಿತ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಬಾದಾಮಿಯಿಂದಲೂ ಸ್ಪರ್ಧಿಸುವುದು ಖಚಿತವಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಎಂರಡೂ ಕ್ಷೇತ್ರಗಳಲ್ಲಿ ಸಿಎಂ ಸ್ಪರ್ಧೆಗೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಂತಾಗಿದೆ.

ಚಾಮುಂಡೇಶ್ವರಿ ಕ್ಷೇತ್ರ ಸೇಫಲ್ಲ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಬಾದಾಮಿ ಕ್ಷೇತ್ರಕ್ಕೆ  ಶಾಸಕ ಚಿಮ್ಮನ ಕಟ್ಟಿ ಅವರ ಹೆಸರು ಘೋಷಿಸಿದ್ದರೂ ಬಿ ಫಾರಂ ಮಾತ್ರ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಹೈಕಮಾಂಡ್‌ ಸ್ಪರ್ಧೆಗೆ ಅವಕಾಶ ನೀಡಿದೆ. ಈ ವಿಷಯವನ್ನು ಸಿಎಂ ಪುತ್ರ ಯತೀಂದ್ರ ಖಚಿತಪಡಿಸಿದ್ದಾರೆ.

Leave a Reply

Your email address will not be published.