ಜೆಡಿಎಸ್‌ನ ಎರಡನೇ ಪಟ್ಟಿ ಬಿಡುಗಡೆ : ಕೈ, ಕಮಲ ಬಿಟ್ಟು ತೆನೆಹೊತ್ತವರಿಗೆ ಮಣೆ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ಈಗಾಗಲೆ ಮೂರೂ ಪ್ರಧಾನ ಪಕ್ಷಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಜೆಡಿಎಸ್‌ ಎರಡನೇ ಪಟ್ಟಿ ರಿಲೀಸ್‌ ಮಾಡಿದೆ.

ಈಗಾಗಲೆ ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಹೆಸರಿಲ್ಲದ ನಾಯಕರು ಪಕ್ಷ ಜಿಗಿತದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಈಗ ಅಭ್ಯರ್ಥಿಗಳು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಗರದ ಜೆ.ಪಿ. ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ. ದೇವೇಗೌಡ 58 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಜೆಡಿಎಸ್‌ ಸೇರಿರುವವರಿಗೆ ಮಣೆ ಹಾಕಲಾಗಿದೆ.

 

Leave a Reply

Your email address will not be published.