ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದ ಹಿನ್ನೆಲೆ : ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದ ಆಕಾಂಕ್ಷಿ

ದಾವಣಗೆರೆ : ಕಾಂಗ್ರೆಸ್‌ನಿಂದ ಚುನಾವಣೆಗೆ ಟಿಕೆಟ್‌ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಟಿಕೆಟ್ ಆಕಾಂಕ್ಷಿ ಪುಷ್ಪಾ ಲಕ್ಷ್ಮಣಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಪುಷ್ಪಾ ದಾಖಲಾಗಿದ್ದಾರೆ. ಜಗಳೂರಿನಿಂದ ಪುಷ್ಪಾ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಕೊನೆಯ ಗಳಿಗೆಯಲ್ಲಿ ಹಾಲಿ ಶಾಸಕ ಎಚ್.ಪಿ ರಾಜೇಶ್‌ ಅವರಿಗೆ ಹೈಕಮಾಂಡ್‌ ಬಿ ಫಾರಂ ನೀಡಿದ್ದು, ಇದರಿಂದ ಬೇಸರಗೊಂಡಿರುವ ಪುಷ್ಪಾ ಹಾಸಿಗೆ ಹಿಡಿದಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ವೈದ್ಯರು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com