ರಂಗೇರಿದ ಚುನಾವಣಾ ಕಣ : ನಾಮಪತ್ರ ಸಲ್ಲಿಸಿದ ಘಟಾನುಘಟಿ ನಾಯಕರು

ಬೆಂಗಳೂರು : ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕದನ ಕಣ ರಂಗೇರುತ್ತಿದೆ. ಅದರಲ್ಲೂ ಮುಖ್ಯಮಂತ್ರಿಗಳ ತವರು ಮೈಸೂರಲ್ಲಿ ಚುನಾವಣಾ ಕಾವು ಹೆಚ್ಚಾಗಿದೆ. ಬಿಸಿಲಿನ ಝಳಕ್ಕಿಂತ ಚುನಾವಣೆಯ ತಾಪ ಹೆಚ್ಚು ಎನಿಸಿದೆ. ಇಂದು ಹೈವೋಲ್ಟೇಜ್ ಕ್ಷೇತ್ರಗಳಾದ ಚಾಮುಂಡೇಶ್ವರಿ ಹಾಗು ವರುಣಾದಲ್ಲಿ  ಘಟಾನುಘಟಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ, ವರುಣಾ ಕ್ಷೇತ್ರದಿಂದ ಡಾ.ಯತೀಂದ್ರ, ನರಸೀಪುರದಿಂದ ಅಶ್ವಿನ್​, ಕೆ.ಆರ್​.ನಗರದಿಂದ ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್​ ಸೇರಿ ಹಲವರು ಉಮೇದುವಾರಿಕೆ ಸಲ್ಲಿಸಿದರು.

ಉಪ ಚುನಾವಣೆಯಲ್ಲಿ ತಮ್ಮ ಕೈ ಹಿಡಿದು ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಚಾಮುಂಡೇಶ್ವರಿಯಿಂದಲೇ ಕೊನೆಯ ಚುನಾವಣೆ ಎದುರಿಸುವ ಇಂಗಿತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ,ಇದಕ್ಕಾಗಿ ಮೈಸೂರು ತಾಲೂಕು ಕಚೇರಿಯಲ್ಲಿ ಅಪಾರ ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದ್ರು. ಮೈಸೂರಿನ ಶಾರದಾದೇವಿ ನಗರ ನಿವಾಸದಿಂದ ಹೊರಟ ಸಿಎಂ ನೇರವಾಗಿ ಅಕ್ಕನ ಬಳಗದ ಪತ್ರಕರ್ತರ ಭವನಕ್ಕೆ ತೆರಳಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡರು. ಬಳಿಕ  ನೇರವಾಗಿ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿ ತಮ್ಮ ಮನೆ ದೇವರಾದ ಸಿದ್ದರಾಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.
ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸಚಿವ ಎಚ್.ಎಂ.ರೇವಣ್ಣ ಹಾಗೂ ಮಾಗಡಿಯಿಂದ ಬಾಲಕೃಷ್ಣ ನಾಮಪತ್ರ ಸಲ್ಲಿಸಿದ ಇತರೆ ಪ್ರಮುಖರು.

 

Leave a Reply

Your email address will not be published.

Social Media Auto Publish Powered By : XYZScripts.com