ಉಡುಪಿ : ವೇಯ್ಟ್ ಲಿಫ್ಟಿಂಗ್‌ ಬೆಳ್ಳಿ ಪದಕ ಗೆದ್ದ ಗುರುರಾಜ್ ಗೆ ತವರಿನಲ್ಲಿ ಅದ್ದೂರಿ ಸ್ವಾಗತ

ಉಡುಪಿ ಜಿಲ್ಲೆಯ ಚುನಾವಣಾ ರಾಯಭಾರಿ ಕಾಮನ್‌ವೆಲ್ತ್ ಗೇಮ್ಸ್‌ನ ವೇಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ವಂಡ್ಸೆಯ ಗುರುರಾಜ್ ಪೂಜಾರಿ ಅವರನ್ನು ಉಡುಪಿ ಜಿಲ್ಲಾಡಳಿತ ವತಿಯಿಂದ ಇಂದು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ವಿಶೇಷವಾಗಿ ಉಡುಪಿ ಯುವಜನ ಸಬಲೀಕರಣ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಗುರುರಾಜ ಅವರನ್ನು ಬರಮಾಡಿಕೊಂಡು, ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಕರೆತಂದರು.

ಈ ಸಂದರ್ಭ ಉಪಸ್ಥಿತರಿದ್ದ ಗುರುರಾಜ್ ಅವರ ಪೋಷಕರು, ಹುಟ್ಟೂರಿನವರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಜಿಲ್ಲಾಡಳಿತ ಪರವಾಗಿ ಸನ್ಮಾನಿಸಿ ಗೌರವಿಸಿದರು.

ಉಡುಪಿ ಜಿಲ್ಲೆಯಲ್ಲಿ ಸಿಕ್ಕ ಸ್ವಾಗತಕ್ಕೆ ಹರ್ಷ ವ್ಯಕ್ತಪಡಿಸಿದ ಗುರುರಾಜ್, ಚುನಾವಣಾ ರಾಯಭಾರಿಯಾಗಿ ಮತದಾರರು ಅಗತ್ಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಸಂದೇಶ ನೀಡಿದರು.

Leave a Reply

Your email address will not be published.

Social Media Auto Publish Powered By : XYZScripts.com