ಯಾರೇ ಎಷ್ಟೇ ಒತ್ತಾಯಿಸಿದರೂ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ : ಅಂಬರೀಶ್‌

 

ಮಂಡ್ಯ : ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಟ,  ಮಾಜಿ ಸಂಸದ ಅಂಬರೀಶ್‌ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವಂತೆ ಹೇಳಲು ಸಚಿವ ಜಾರ್ಜ್‌ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಮುಖಂಡ ಅಮರಾವತಿ ಚಂದ್ರಶೇಖರ್‌ ಅಂಬರೀಶ್‌ ಅವರ ನಿವಾಸಕ್ಕೆ ತೆರಳಿದ್ದರು.

ಈ ವೇಳೆ ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಂಬರೀಶ್ ಹೇಳಿದ್ದಾರೆ. ನಾನು ವಸತಿ ಸಚಿವನಾಗಿದ್ದಾಗ ಉತ್ತಮ ಕೆಲಸ ಮಾಡುತ್ತಿದ್ದೆ. ಅದಕ್ಕಾಗಿ ನನಗೆ ಪ್ರಶಸ್ತಿಯೂ ಸಿಕ್ಕಿತ್ತು. ನನ್ನನ್ನು ಬಲವಂತವಾಗಿ ರಾಜೀನಾಮೆ ನೀಡುವಂತೆ ಮಾಡಿದ್ದೀರಿ. ಆಗ ನನಗೆ ರಾಜೀನಾಮೆ ಕೊಡಿಸಿ ಈಗ ಮಾತ್ರ ಯಾಕೆ ಒತ್ತಾಯಿಸುತ್ತೀರಿ ಎಂದು ಅಂಬರೀಶ್ ಪ್ರಶ್ನಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com