ಅಂಬರೀಶ್ ಆಯ್ತು, ಈಗ ರಮ್ಯಾ ಸರದಿ.. ನಾನೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದ್ರು ಮೋಹಕ ತಾರೆ !

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ ಅಂಬರೀಶ್‌ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಸಕ್ತಿ ತೋರಿರುವ ಬೆನ್ನಲ್ಲೇ ರಮ್ಯಾ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಮಂಡ್ಯ ಅಭ್ಯರ್ಥಿಯಾಗಿ ಅಂಬರೀಶ್‌ ಅವರು ಚುನಾವಣೆಗೆ ನಿಲ್ಲುತ್ತಿಲ್ಲ. ಆದ್ದರಿಂದ ರಮ್ಯಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದ್ದು, ಈ ಸುದ್ದಿ ಎಲ್ಲೆಡೆ ಕೇಳಿಬರುತ್ತಿದ್ದಂತೆ ಟ್ವೀಟ್‌ ಮಾಡಿರುವ ರಮ್ಯಾ, ನಾನು ಖಂಡಿತವಾಗಿಯೂ ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಖಚಿತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com