ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೇವೆ, ಚುನಾವಣೆಯಲ್ಲಿ ಸ್ಪರ್ಧಿಸಬೇಕು ಅಷ್ಟೇ : CM

ಮೈಸೂರು : ಮಾಜಿ ಸಚಿವ ಅಂಬರೀಶ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಅಂಬರೀಶ್‌  ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಿಲ್ಲ. ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡುವುದು ಬೇಡ. ಬಿ ಫಾರಂ ನೀಡುವುದು ನಾನಲ್ಲ, ಪಕ್ಷದ ಅಧ್ಯಕ್ಷರು. ಅಂಬರೀಶ್‌ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರು ಸ್ಪರ್ಧಿಸಬೇಕಷ್ಟೇ ಎಂದಿದ್ದಾರೆ.

ಇದೇ ವೇಳೆ ಬಾದಾಮಿಯಲ್ಲಿ ಸ್ಪರ್ಧೆ ಮಾಡುವ ವಿಚಾರ ಸಂಬಂಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ನನಗೆ ಬಾದಾಮಿಯಿಂದ ಸ್ಪರ್ಧಿಸಬೇಕೆಂದ ಅಪೇಕ್ಷೆಯೇನೂ ಇಲ್ಲ. ಅಲ್ಲಿನ ಕಾರ್ಯಕರ್ತರು, ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com