ಟಿಕೆಟ್‌ ಸಿಗದ ಹಿನ್ನೆಲೆ : ಕಾಂಗ್ರೆಸ್‌ನತ್ತ ಮುಖ ಮಾಡಿದ ಬೇಳೂರು ಗೋಪಾಲಕೃಷ್ಣ !!

ಸಾಗರ : ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ ಬಿಜೆಪಿ ಮೇಲೆ ಮುನಿಸಿಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್‌ ನತ್ತ ಮುಖ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಾಗೋಡು ತಿಮ್ಮಪ್ಪನವರ ತಂಗಿಯ ಮಗನಾಗಿರುವ ಬೇಳೂರು ಗೋಪಾಲಕೃಷ್ಣ ಮಾವನಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್‌ ಸೇರ್ಪಡೆಯಾಗುವುದರಿಂದ ಕಾಗೋಡು ತಿಮ್ಮಪ್ಪ ಅವರ ಮುಂದಿನ ಉತ್ತರಾಧಿಕಾರಿಯಾಗಬಹುದು ಎಂಬ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿ ಬಿಎಸ್‌ವೈ ಪುತ್ರ ರಾಘವೇಂದ್ರ ಅವರ ವಿರುದ್ಧ ಬೇಳೂರು ಪ್ರಬಲ ಸ್ಪರ್ಧೆ ಒಡ್ಡುವ ಸಾಧ್ಯತೆ ಇದೆ. ಬೇಳೂರು ಕಾಂಗ್ರೆಸ್‌ ಸೇರ್ಪಡೆ ಕುರಿತು ಕಾಗೋಡು ತಿಮ್ಮಪ್ಪ ಈಗಾಗಲೆ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com