ಬಿಜೆಪಿಗೆ ಗುಡ್‌ ಬೈ ಹೇಳಿ ರಾಜಕೀಯ ಸನ್ಯಾಸತ್ವ ಸ್ವೀಕರಿಸಿದ ಯಶವಂತ ಸಿನ್ಹಾ

ಪಾಟ್ನಾ : ತಮ್ಮದೇ ಸರ್ಕಾರದ ತಪ್ಪುಗಳನ್ನು ಎತ್ತಿಹಿಡಿದು ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ, ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಪಕ್ಷ ತ್ಯಜಿಸಿದ್ದಾರೆ.

ನಾನು ಬಿಜೆಪಿ ಪಕ್ಷವನ್ನು ತೊರೆಯುತ್ತಿದ್ದು , ಇಂದಿನಿಂದ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತಿದ್ದೇನೆ. ಅಲ್ಲದೆ ಬಿಜೆಪಿಯೊಂದಿಗೆ ಇದುವರೆಗೂ ಇದ್ದ ಎಲ್ಲಾ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶೇ.40ರಷ್ಟು ಸಂಸದರು ಮರು ಆಯ್ಕೆಯಾಗುತ್ತಾರೆ. ಇತರರು ಸರ್ಕಾರದ ವೈಫಲ್ಯದಿಂದ ಸೋಲನುಭವಿಸುತ್ತಾರೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದಾರೆ.

ಕೆಲ ತಿಂಗಳಿನಿಂದ ಯಶವಂತ್ ಸಿನ್ಹಾ, ಬಿಜೆಪಿ ವಿರುದ್ಧವೇ ತಿರುಗಿ ಬಿದ್ದಿದ್ದು, ಮೋದಿ ಸರ್ಕಾರದ ಕೆಲ ನಿರ್ಧಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸ್ವತಃ ಹಣಕಾಸು ಮಂತ್ರಿಯಾಗಿದ್ದ ಸಿನ್ಹಾ, ಮೋದಿ ಸರ್ಕಾರದ ಆರ್ಥಿಕ ನೀತಿ ಹಾಗೂ ಮಹಿಳೆಯರ ಸುರಕ್ಷತೆ ಬಗ್ಗೆ ಕೇಂದ್ರದ ನಡೆ ಕುರಿತು ಅಸಮಾಧಾನ ಹೊಂದಿದ್ದರು.

 

Leave a Reply

Your email address will not be published.

Social Media Auto Publish Powered By : XYZScripts.com