ಕಾಂಗ್ರೆಸ್‌ ದೇಶ ಹಾಳುಮಾಡ್ತಿದ್ರೆ ಸಿದ್ದರಾಮಯ್ಯ ಕರ್ನಾಟಕವನ್ನು ಹಾಳು ಮಾಡ್ತಿದ್ದಾರೆ : BSY

ಚಿಕ್ಕಮಗಳೂರು : ದೇಶವನ್ನು ಕಾಂಗ್ರೆಸ್‌ ಹಾಳು ಮಾಡುತ್ತಿದ್ದರೆ ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯ ಕಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಮ್ಮ ಸ್ವಂತ ಕ್ಷೇತ್ರದಲ್ಲೇ ಸಿಎಂಗೆ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಬಾದಾಮಿಗೆ ಓಡಿದ್ದಾರೆ. ಅಲ್ಲೂ ಅವರು ಗೆಲ್ಲಲು ಸಾಧ್ಯವಿಲ್ಲ. ರಾಜ್ಯದ ಜನರಿಗೆ ಸಂಕಷ್ಟ ತಂದ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತುಹಾಕಬೇಕು ಎಂದಿದ್ದಾರೆ.

ಇದೇ ವೇಳೆ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಲಿಷ್ಠ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ. ವರುಣಾ, ಚಾಮುಂಡೇಶ್ವರಿ, ಬಾದಾಮಿಯಲ್ಲಿ ಸಿಎಂರನ್ನು ಸೋಲಿಸಲು ಸಂಕಲ್ಪ ಮಾಡಿದ್ದೇವೆ. ಅದು ನಡೆದೇ ತೀರುತ್ತದೆ. ಬಿಜೆಪಿಯಿಂದ ಬಾದಾಮಿಯಲ್ಲಿ ಯಾರು ನಿಲ್ಲಬೇಕು ಎಂಬುದು ಅಂತಿಮವಾಗಿಲ್ಲ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com