ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಬಾಲಕಿಗೆ ಡ್ರಗ್ಸ್‌ ನೀಡಿ ವೈದ್ಯನಿಂದ ಅತ್ಯಾಚಾರ !!

ಲಖನೌ : ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕೇಂದ್ರ ಸರ್ಕಾರ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಮಾಡಿದ ಆರೋಪಿಗೆ ಮರಣದಂಡನೆ ಶಿಕ್ಷೆ ಜಾರಿ ಮಾಡಿ ಅದಕ್ಕೆ ರಾಷ್ಟ್ರಪತಿಗಳಿಂದ ಸಹಿ ಬಿದ್ದ ದಿನವೇ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದ 13 ವರ್ಷದ ಬಾಲಕಿಯ ಮೇಲೆ ಕಾಮುಕ ವೈದ್ಯನೊಬ್ಬ ನೀಚಕೃತ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಪ್ರಾಪ್ತೆ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಮನೆಗೆ ಬರುವ ಎರಡು ದಿನಗಳ ಹಿಂದೆ ಆಕೆ ಕಾಣೆಯಾಗಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ವಿಚಾರಿಸಿದಾಗ ನಡೆದ ಘಟನೆ ವಿವರಿಸಿದ್ದು, ಕೂಡಲೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿತವಾಗಿದೆ. ಅಪ್ರಾಪ್ತೆಗೆ ಬಲವಂತವಾಗಿ ಡ್ರಗ್ಸ್‌ ನೀಡಿ ಬಳಿಕ ಅತ್ಯಾಚಾರವೆಸಗಿದ್ದಾನೆ. ತನಿಖೆಯ ವೇಳೆ ಆಸ್ಪತ್ರೆಯಲ್ಲಿ ಕೆಲ ಆಕ್ಷೇಪಾರ್ಹ ವಸ್ತುಗಳು ಸಿಕ್ಕಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com