ಯತೀಂದ್ರಗೆ ಹೆದರಿದರೇ ವಿಜಯೇಂದ್ರ : ವರುಣಾದಲ್ಲಿ ಸ್ಪರ್ಧಿಸುತ್ತಿಲ್ಲವಂತೆ BSY ಪುತ್ರ !!

ಬೆಂಗಳೂರು : ಬಿಜೆಪಿ ಕೊನೆಯ ಪಟ್ಟಿ ರಿಲೀಸ್ ಆಗುವುದಕ್ಕೂ ಮುನ್ನ ಬಿಜೆಪಿಯಲ್ಲಿ ಭಾರೀ ಬೆಳವಣಿಗೆ ಕಂಡು ಬಂದಿದ್ದು, ಹೈವೋಲ್ಟೇಜ್‌ ಕ್ಷೇತ್ರ ಎನಿಸಿಕೊಂಡಿರುವ ವರುಣಾದಲ್ಲಿ ಯಡಿಯೂರಪ್ಪ ಪುತ್ಪ ವಿಜಯೇಂದ್ರ ಸ್ಪರ್ಧೆ ಅನುಮಾನವಾಗಿದೆ.

ನಾವು ಸೂಚನೆ ನೀಡುವವರೆಗೂ ಅಂತಿಮ ಪಟ್ಟಿಯ ಹೆಸರು ರಿಲೀಸ್‌ ಮಾಡದಂತೆ ಬಿಜೆಪಿ ಹೈಕಮಾಂಡ್‌ ಸೂಚಿಸಿದ್ದು, ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

ಈ ಕುರಿತು ಯಡಿಯೂರಪ್ಪ ಹೇಳಿಕೆ ನೀಡಿದ್ದು, ನಂಜನಗೂಡು ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, ವರುಣಾದಲ್ಲಿ ನನ್ನ ಮಗ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ. ಬದಲಿಗೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ನೀಡಲಾಗುತ್ತಿದೆ ಎಂದಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ವಿಜಯೇಂದ್ರಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com