ನಮ್ಮದು ದೊಡ್ಡ ದೇಶ, ಒಂದೆರಡು ಅತ್ಯಾಚಾರ ಆಗ್ತಿರ್ತಾವೆ ಬಿಡಿ ಎಂದ ಬಿಜೆಪಿ ನಾಯಕ !!

ದೆಹಲಿ : ಭಾರತ ದೊಡ್ಡ ದೇಶ. ಇಂತಹ ದೇಶದಲ್ಲಿ ಒಂದೆರಡು ಅತ್ಯಾಚಾರ ಸಾಮಾನ್ಯ ಎಂದು ಕೇಂದ್ರ ಸಚಿವ ಸಂತೋಷ್‌ ಗಂಗ್ವಾರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಲ್ಲದೆ ಮಾಧ್ಯಮಗಳು ಇದನ್ನೇ ದೊಡ್ಡದಾಗಿ ಬಿಂಬಿಸಬಾರದು ಎಂದಿದ್ದಾರೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರು ಅತ್ಯಾಚಾರ ವಿಚಾರ ಸಂಬಂಧ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಗಂಗ್ವಾರ್‌, ಇಂತಹ ಪ್ರಕರಣಗಳು ನಡೆಯುತ್ತಿರುವುದು ದುರದೃಷ್ಟಕರ. ಕೆಲವೊಮ್ಮೆ ಇಂತಹ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಅಲ್ಲದೆ ಭಾರತದಂತಹ ದೊಡ್ಡ ದೇಶದಲ್ಲಿ ಒಂದೆರಡು ಅತ್ಯಾಚಾರಗಳು ನಡೆಯುತ್ತವೆ. ಅದನ್ನೇ ದೊಡ್ಡದು ಎಂಬಂತೆ ಬಿಂಬಿಸುವ ಅಗತ್ಯವಿಲ್ಲ ಎಂದಿದ್ದಾರೆ.

 ಈ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ನನ್ನ ಹೇಳಿಕೆಯನ್ನು ತಿರುಚಬೇಡಿ ಎಂದು ನಾನು ಮೊದಲೇ ಹೇಳಿದ್ದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಮಾಧ್ಯಮಳು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಇಂತಹ ಪ್ರಕರಣಗಳಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಮಾಧ್ಯಮಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com