ನಾಮಪತ್ರ ಸಲ್ಲಿಸಿ ಹಿಂತಿರುಗುವ ವೇಳೆ ಅಪಘಾತ : ನಾಲ್ವರು BJP ಕಾರ್ಯಕರ್ತರ ಸಾವು

ಚಿಕ್ಕಮಗಳೂರು : ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಮೃತರನ್ನು ಆಂಜನೇಯ (45), ಸುರೇಶ್, (40) ಆನಂದ (32) ಎಂದು ಹೆಸರಿಸಲಾಗಿದ್ದು, ಮತ್ತೊಬ್ಬರ ಗುರುತು ದೊರೆತಿಲ್ಲ.

ಬಿಜೆಪಿ ಅಭ್ಯರ್ಥಿ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಸುರೇಶ್‌ ನಾಮಪತ್ರ ಸಲ್ಲಿಸಿದ ಬಳಿಕ ಹಿಂದಿರುಗುವ ವೇಳೆ ಕಾರ್ಯಕರ್ತರು ಇದ್ದ ಬುಲೆರೋ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಇಬ್ಬರು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ತರೀಕೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com