ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ : ಅಸಾರಾಂ ಬಾಪು ಅಪರಾಧಿ ಎಂದ ಕೋರ್ಟ್‌

ಜೋಧ್‌ಪುರ : ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ದದ ಅತ್ಯಾಚಾರ ಪ್ರಕರಣ ಸಂಬಂಧ ಜೋಧ್‌ಪುರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಅಸಾರಾಂ ಬಾಪು ಅಪರಾಧಿ ಎಂದು ತೀರ್ಪು ನೀಡಿದೆ.

ಅಪರಾಧಿ ಅಸಾರಾಂ ಬಾಪು, ಮಧ್ಯ ಪ್ರದೇಶದ ಚಿಂದ್ವಾರದ ತನ್ನದೇ ಆಶ್ರಮದಲ್ಲಿ ಓದುತ್ತಿದ್ದ ಉತ್ತರ ಪ್ರದೇಶ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. 2013ರ ಆಗಸ್ಟ್‌ನಲ್ಲಿ ಬಾಲಕಿಯನ್ನು ಜೋಧ್‌ಪುರದ ಮನಾಯ್‌ ಪ್ರದೇಶದ ಬಳಿಯ ಆಶ್ರಮಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.

ಈ ಹಿನ್ನೆಲೆಯಲ್ಲಿ ಆತನನ್ನು ಆಗಸ್ಟ್ 31ರಂದು ಬಂಧಿಸಲಾಗಿತ್ತು. ಸೆಪ್ಟಂಬರ್‌ 2ರಿಂದ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿತ್ತು. ಅಲ್ಲದೆ ಪ್ರಕರಣ ಸಂಬಂಧ ಇತರೆ ಆರೋಪಿಗಳಾದ ಶಿವ, ಶಿಲ್ಪಿ, ಶರದ್‌, ಪ್ರಕಾಶ್‌ ವಿರುದ್ಧ 2013ರ ನವೆಂಬರ್‌ 6ರಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇಂದು ನ್ಯಾಯಾಲಯ ನೀಡಿದ್ದ ತೀರ್ಪಿನ ಕುರಿತು ಬಾಲಕಿಯ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಮಗೆ ನ್ಯಾಯ ಸಿಕ್ಕಿದೆ. ಈ ಹೋರಾಟದಲ್ಲಿ ನಮಗೆ ಬೆಂಬಲಿಸಿದ್ದವರಿಗೆ ಎಷ್ಟು ಅಭಿನಂದನೆ ಸಲ್ಲಿಸಿದರೂ ಕಡಿಮೆಯೇ, ಕಳೆದ ನಾಲ್ಕು ವರ್ಷಗಳಲ್ಲಿ ಅಸಾರಾಂ ವಿರುದ್ಧ ಸಾಕ್ಷಿ ಹೇಳಿದ್ದವರ ಮೇಲೆ ಹಲ್ಲೆ ನಡೆದಿತ್ತು. ಅದರಲ್ಲಿ ಮೂವರು ಸಾವಿಗೀಡಾಗಿದ್ದರು. ಇಂದು ನನ್ನ ಮಗಳಿಗೆ ನ್ಯಾಯ ಸಿಕ್ಕಿರುವುದಾಗಿ ಹೇಳಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com