ಬಾಲಿವುಡ್‌ನಲ್ಲಿ ಕಾಸ್ಟಿಂಗ್‌ ಕೌಚ್‌ : ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ರು ಹರ್ಷಿಕಾ ಪೂಣಚ್ಚ

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್‌ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್‌ ಕೌಚ್‌ ವಿರುದ್ಧ ನಟಿ ಶ್ರೀರೆಡ್ಡಿ ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದರು. ಅದಾದ ಬಳಿಕ ಒಬ್ಬೊಬ್ಬರೇ ನಟಿಯರು ಕಾಸ್ಟಿಂಗ್‌ ಕೌಚ್‌ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ.

ಅಂತೆಯೇ ನಟಿ ಹರ್ಷಿಕಾ ಪೂಣಚ್ಚ ಸಹ ತಮಗಾದ ಲೈಂಗಿಕ ಕಿರುಕುಳದ ಅನುಭವವನ್ನು ಹಂಚಿಕೊಂಡಿದ್ದಾರೆ. ಕನ್ನಡ, ತೆಲುಗು ಹಾಗೂ ಮಲೆಯಾಳಂ ಚಿತ್ರಗಳಲ್ಲಿ ನಾನು ನಟಿಸಿದ್ದೇನೆ. ಇಲ್ಲಿ ನನಗೆ ಅಂತಹ ಕೆಟ್ಟ ಅನುಭವವಾಗಿಲ್ಲ. ಆದರೆ ಬಾಲಿವುಡ್‌ನಲ್ಲಿ ನನಗೆ ಕಹಿ ಅನುಭವವಾಗಿತ್ತು. ಆ ಕಾರಣಕ್ಕೆ ಬಾಲಿವುಡ್‌ನ 2 ಸಿನಿಮಾಗಳನ್ನು ಕೈಬಿಟ್ಟಿದ್ದಾಗಿ ಹೇಳಿದ್ದಾರೆ.

4 thoughts on “ಬಾಲಿವುಡ್‌ನಲ್ಲಿ ಕಾಸ್ಟಿಂಗ್‌ ಕೌಚ್‌ : ತಮಗಾದ ಕಹಿ ಅನುಭವವನ್ನು ಬಿಚ್ಚಿಟ್ರು ಹರ್ಷಿಕಾ ಪೂಣಚ್ಚ

Leave a Reply

Your email address will not be published.

Social Media Auto Publish Powered By : XYZScripts.com