IPL : ಡೆಲ್ಲಿ ತಂಡದ ನಾಯಕತ್ವ ತ್ಯಜಿಸಿದ ಗಂಭೀರ್ : ಶ್ರೇಯಸ್ ಅಯ್ಯರ್ ಗೆ DD ಸಾರಥ್ಯ

ದೆಹಲಿಯ ಎಡಗೈ ಆರಂಬಿಕ ಬ್ಯಾಟ್ಸಮನ್ ಗೌತಮ್ ಗಂಭೀರ್ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಡೆಲ್ಲಿ ತಂಡದ ಯುವ ಪ್ರತಿಭಾವಂತ ಬ್ಯಾಟ್ಸಮನ್ ಶ್ರೇಯಸ್ ಅಯ್ಯರ್ ಅವರನ್ನು ಹೊಸ ನಾಯಕನಾಗಿ ನೇಮಕ ಮಾಡಲಾಗಿದೆ.

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಗಂಭೀರ್ ನಾಯಕತ್ವದ ಡೆಲ್ಲಿ ತಂಡ ಸತತ ಸೋಲುಗಳನ್ನು ಕಂಡ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಡೆಲ್ಲಿ ಡೇರ್ ಡೆವಿಲ್ಸ್ ಈ ಬಾರಿ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋಲು ಕಂಡಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಬುಧವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿರುವ ಗಂಭೀರ್ ‘ ನಾನು ಒಬ್ಬನೇ ಕುಳಿತು ಆಲೋಚಿಸಿದ್ದೇನೆ, ನನ್ನಿಂದ ನಾಯಕತ್ವದ ಒತ್ತಡವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ.  ಒತ್ತಡ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿ ಇಲ್ಲ ‘ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com