ಶಿವಮೊಗ್ಗದಲ್ಲಿ ಈಶ್ವರಪ್ಪ ಅವರನ್ನು ಸೋಲಿಸಲು ಯಡಿಯೂರಪ್ಪ ಹೂಡಿದ್ದಾರೆ ಸಂಚು…..!!

ಶಿವಮೊಗ್ಗ : ಶಿವಮೊಗ್ಗದಿಂದ ಚುನಾವಣೆಗೆ ನಿಂತಿರುವ ಈಶ್ವರಪ್ಪ ಅವರನ್ನು ಸೋಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಸಂಚು ರೂಪಿಸಿರುವುದಾಗಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ ಸಾಗರ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡರ ಮೂಲಕ ಈಶ್ವರಪ್ಪ ಅವರನ್ನು ಬಿಎಸ್‌ವೈ ಸೋಲಿಸಲು ಸಂಚು ರೂಪಿಸಿರುವುದಾಗಿ ಆರೋಪ ಹೊರಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ, ಸ್ವಾರ್ಥ ರಾಜಕಾರಣಯಲ್ಲಿ ಯಡಿಯೂರಪ್ಪ ತೊಡಗಿಕೊಂಡಿದ್ದಾರೆ. ಕೆಜೆಪಿಯಿಂದ ಬಂದ ಯಡಿಯೂರಪ್ಪ ಬಿಜೆಪಿಗೆ ಟೋಪಿ ಹಾಕಲು ಹೊರಟಿದ್ದಾರೆ. ಹೊಟ್ಟು ವ್ಯಾಪಾರ ಮಾಡಲು ಶಿಕಾರಿಪುರಕ್ಕೆ ಬಂದಿದ್ದ ಯಡಿಯೂರಪ್ಪ ಸಾವಿರಾರು ಕೋಟಿ ರೂ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದನ್ನು ಜನರಿಗೆ ತಿಳಿಸಬೇಕು ಎಂದಿದ್ದಾರೆ. ಜೊತೆಗೆ ಕಾಂಗ್ರೆಸ್‌ಗೆ ಯಾವುದೇ ಷರತ್ತು, ಬೇಡಿಕೆ ಇಟ್ಟು ಸೇರಿಲ್ಲ. ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸೇರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com