ಅಭಿವೃದ್ಧಿಯೇ ನಮ್ಮ ಅಜೆಂಡಾ : ರಾಜ್ಯ ಬಿಜೆಪಿ ಅಭ್ಯರ್ಥಿಗಳೊಂದಿಗೆ ಮೋದಿ ಸಂವಾದ

ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿರುವ ಮಧ್ಯೆ ಪ್ರಧಾನಿ  ಮೋದಿ ಕರ್ನಾಟಕದ ಬಿಜೆಪಿ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಭ್ಯರ್ಥಿಗಳೊಂದಿಗೆ ಮಾತನಾಡಿದ ಅವರು, ಅಬಿವೃದ್ದಿಯೇ ನಮ್ಮ ಅಜೆಂಡಾ, ನನಗೆ ಕನ್ನಡ ಗೊತ್ತಿಲ್ಲ, ಇಂಗ್ಲೀಷ್‌ ಅಥವಾ ಹಿಂದಿಯಲ್ಲೇ ಮಾತನಾಡುತ್ತೇನೆ. ಆದರೂ ನನ್ನನ್ನು ಕನ್ನಡಿಗನೆಂದೇ ಪರಿಗಣಿಸಿ ಎಂದು ಮಾತುಕತೆ ನಡೆಸಿದ್ದಾರೆ.
ನಾವು ಅಭಿವೃದ್ಧಿಗೆ ಮೊದಲ ಮಾನ್ಯತೆ ನೀಡಬೇಕು. ನಮ್ಮ ಪಕ್ಷ ಬಿಟ್ಟು ಇನ್ಯಾವ ಪಕ್ಷಗಳೂ ಅಭಿವೃದ್ಧಿಯ ಕಡೆ ಗಮನ ಹರಿಸಿಲ್ಲ.  ಬೂತ್‌ ಮಟ್ಟದ ಕಾರ್ಯಕರ್ತರೇ ನಮ್ಮ ಪಕ್ಷದ ಬಲ. ಇಡೀ ವಿಶ್ವವೇ ಎದುರಾದರೂ ನಮ್ಮ ಪಕ್ಷವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಗಂಧದ ನಾಡಾಗಿುವ ಕರ್ನಾಟಕಲ್ಲಿ ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದೆ. ಆದ್ದರಿಂದ ಗಂಧದ ಮಾರುಕಟ್ಟೆ ಆಸ್ಟ್ರೇಲಿಯಾದಲ್ಲಿ ದೊಡ್ಡದಾಗಿದೆ. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಮತ್ತೆ ಗಂಧದ ಮರ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದಿದ್ದಾರೆ.
ನಮ್ಮ ದೃಷ್ಟಿ ಏನಿದ್ದರೂ ಅಭಿವೃದ್ಧಿಯೆಡೆಗೆ ಮಾತ್ರ ಇರಬೇಕು. ಬೇರೆ ಪಕ್ಷಗಳಂತೆ ಧರ್ಮ, ಜಾತಿ ಒಡೆದು ಮತ ಕೇಳಬಾರದು. ಅಭಿವೃದ್ಧಿಯನ್ನು ಹಿಡಿದುಕೊಂಡು ಮತ ಕೇಳಬೇಕು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಹೆಚ್ಚಿನ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಿತ್ತು. ಆದರೆ ಈಗ ಯಾವುದೇ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದಿದ್ದಾರೆ.
ಬಳಿಕ ಪ್ರಧಾನಿ ಮೋದಿ, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಧಾರವಾಡ ಶಾಸಕ ಅರವಿಂದ ಬೆಲ್ಲದ, ಶಾಸಕ ಸಿ.ಟಿ ರವಿ, ರಾಜಾಜಿನಗರ ಶಾಸಕ ಸುರೇಶ್‌ ಕುಮಾರ್ ಅವರೊಂದಿಗೆ ಸಂವಾದ ನಡೆಸಿದರು.

Leave a Reply

Your email address will not be published.