ಕಾವೇರಿ ಕರಡು ರಚನೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಕೊಡಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್‌

ದೆಹಲಿ : ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್‌ ನೀಡಿದ್ದ ಗಡುವು ಸಮೀಪಿಸುತ್ತಿದ್ದು, ಅಷ್ಟರೊಳಗೆ ಕರಡು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆದ್ದರಿಂದ ಇನ್ನೂ ಎರಡು ವಾರ ಹೆಚ್ಚಿನ ಕಾಲಾವಧಿ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಇಂದು ಮತ್ತೆ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮತ್ತೆ ಕಾಲಾವಕಾಶ ವಿಸ್ತರಿಸಲು ಸಾಧ್ಯವಿಲ್ಲ. ಮೇ 3ರರೊಳಗಾಗಿ ಕರಡು ಸಲ್ಲಿಸುವಂತೆ ಖಡಕ್‌ ಆದೇಶ ರವಾನಿಸಿದೆ. ಮೇ 3ರಂದು ಕೇಂದ್ರ ಸರ್ಕಾರ ಸಲ್ಲಿಸುವ ಕರಡನ್ನು ಪರಿಶೀಲಿಸಿ ತಾನೇ ಸಮಸ್ಯೆಯನ್ನು ಬಗೆಹರಿಸುವುದಾಗಿ ನ್ಯಾಯಾಲಯ ಹೇಳಿದೆ.

Leave a Reply

Your email address will not be published.