ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ : ನಾಲ್ವರ ಸಜೀವ ದಹನ

ಮೈಸೂರು: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಕೆ.ಆರ್‌ ನಗರ ತಾಲ್ಲೂಕಿನ ಅನಸೋಗೆ ಗ್ರಾಮದ ತಂದ್ರೆ ಗೇಟ್‌ ಬಳಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ, ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಗುರುವಾರ ರಾತ್ರಿ ಬೈಕ್‌ನಲ್ಲಿ ಡೀಸೆಲ್‌ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಬೈಕ್‌ ಡಿಕ್ಕಿಯಾಗಿದ್ದು, ಡೀಸೆಲ್‌ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಜೀವ ದಹನವಾಗಿದ್ದಾರೆ. ಸುತ್ತಲೂ ಬೆಂಕಿ ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬೆಂಕಿಯಿಂದ ಪಾರಾಗಲು ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆ.ಆರ್‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com