2019ರಲ್ಲಿ ಲೋಕಸಭೆ ಚುನಾವಣೆ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ : ರಾಹುಲ್ ಗಾಂಧಿ

2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ರವಿವಾರ ಹೇಳಿದ್ದಾರೆ. ರಾಜಧಾನಿ ದೆಹಲಿಯಲ್ಲಿ ನಡೆದ ಜನಾಕ್ರೋಶ್ ರ್ಯಾಲಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜಯದ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದರು.

‘ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಉತ್ತಮ ಫಲಿತಾಂಶವನ್ನು ಕಾಂಗ್ರೆಸ್ ಪಡೆದಿತ್ತು. ಛತ್ತೀಸ್ ಗಢ, ಮಧ್ಯಪ್ರದೇಶ, ರಾಜಸ್ಥಾನ, ಕರ್ನಾಟಕ ರಾಜ್ಯಗಳ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಆ ಬಳಿಕ 2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಯಾವತ್ತಿಗೂ ಸತ್ಯದ ಪರವಾಗಿಯೇ ಇರಲಿದ್ದಾರೆ ‘ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com