WATCH : ಅಣ್ಣಾ ನನ್ನನ್ನು ಬಿಟ್ಟುಬಿಡಿ ಎಂದು ಕಿರುಚಿಕೊಂಡರೂ ಕರಗಲಿಲ್ಲ ಕಾಮುಕರ ಹೃದಯ….ಆಮೇಲಾಗಿದ್ದೇನು ?

ಪಾಟ್ನಾ : ಕೇಂದ್ರ ಸರ್ಕಾರ ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗುವ ಕಾಮುಕರಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆದೇಶ ಹೊರಡಿಸಿದ್ದರೂ, ದೇಶದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ.

ಬಿಹಾರದ ಜಿಹಾನಾಬಾದ್‌ನಲ್ಲಿ ಆರು ಮಂದಿ ಕಾಮುಕರು ಅಪ್ರಾಪ್ತ ಬಾಲಕಿಯ ಮೇಲೆ ದಾಳಿ ನಡೆಸಿ  ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ವಿಶೇಷ ತನಿಖಾ ತಂಡಗಳನ್ನು ನೇಮಕ ಮಾಡಲಾಗಿದೆ.

ನಡೆದಿದ್ದೇನು ?

ಆರು ಮಂದಿ ಕಾಮುಕರು ಬಾಲಕಿಗೆ ಕಿರುಕುಳ ನೀಡುತ್ತಿದ್ದು, ಅವರಿಂದ ಬಿಡಿಸಿಕೊಳ್ಳಲು ಬಾಲಕಿ ಯತ್ನಿಸುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಬಾಲಕಿಯನ್ನು ಹಿಡಿದು ಎಳೆದಾಡುತ್ತಿರುವಾಗ ಆಕೆ ಅಣ್ಣ ನನ್ನನ್ನು ಬಿಟ್ಟುಬಿಡಿ ಎಂದು ಕಿರುಚುತ್ತಿದ್ದರೂ ಕಾಮುಕರು ಮಾತ್ರ ಹೃದಯಹೀನರಂತೆ ಆಕೆಯನ್ನು ಹಿಂಸಿಸುತ್ತಿರುವ ದೃಶ್ಯ ವೈರಲ್ ಆಗಿದೆ.

ವಿಡಿಯೋ ರೆಕಾರ್ಡ್‌ ಮಾಡಿದ ಫೋನ್‌ನಿಂದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು, ಆರು ಮಂದಿಯನ್ನು ಅರೆಸ್ಟ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಇಂತಹ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಲ್ಲೆಡೆಯಿಂದ ಆಗ್ರಹ ವ್ಯಕ್ತವಾಗುತ್ತಲೇ ಇದೆ.

Leave a Reply

Your email address will not be published.

Social Media Auto Publish Powered By : XYZScripts.com