ತೆಂಗಿನಕಾಯಿ ಬದಲು ತೆಂಗಿನಮರ ಕೊಟ್ಟಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕೆಜೆಪಿ ಅಭ್ಯರ್ಥಿ !!

ಹಾವೇರಿ : ಚುನಾವಣಾ ಆಯೋಗ ತಾನು ಕೇಳಿದ ಚಿಹ್ನೆಯನ್ನು ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಹಿರೇಕೆರೂರು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಹರೀಶ್‌ ಇಂಗಳಗುಂದಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹರೀಶ್‌, ಕೆಜೆಪಿ ಅಭ್ಯರ್ಥಿಯಾಗಿದ್ದು, ತೆಂಗಿನಕಾಯಿ ಚಿಹ್ನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ತೆಂಗಿನಕಾಯಿ ಬದಲಿಗೆ ತೆಂಗಿನ ಮರ ನೀಡಿದ್ದರು. ಇದರಿಂದ ನೊಂದ ಹರೀಶ್‌, ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸದ್ಯ ಹರೀಶ್ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. .ಹಿರೇಕೆರೂರು ಪೊಲೀಸ್‌ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com