ಚುನಾವಣೆಯಲ್ಲಿ ಗೆದ್ದು. ಸ್ವಂತ ಬಲದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ : ಎಂ.ಬಿ ಪಾಟೀಲ್

ವಿಜಯಪುರದಲ್ಲಿ ಹೇಳಿಕೆ ನೀಡಿರುವ ಸಚಿವ ಎಂ.ಬಿ ಪಾಟೀಲ್ ‘ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ 135-145 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರಕಾರ ರಚಿಸಲಿದೆ ‘ ಎಂದಿದ್ದಾರೆ.

‘ ಬಿಜೆಪಿ ನಾಯಕರಿಗೆ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಸಚಿವ ಸ್ಥಾನ ನೀಡಿಲ್ಲ. ಸಿದ್ದೇಶ್ವರ ಅವರಿಗೆ ನೀಡಿದ್ದ ಸಚಿವ ಸ್ಥಾನವನ್ನ ಕಿತ್ತುಕೊಂಡಿದ್ದಾರೆ ‘ ಎಂದಿದ್ದಾರೆ.

‘ ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿಲ್ಲ. ಚುನಾವಣೆ ಬಳಿಕ ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಿದೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ದರಿದ್ರ ಸಚಿವ ‘ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com