IPL : ಉತ್ತಮ ಬೌಲಿಂಗ್ ಪ್ರದರ್ಶಿಸಿದ SRH : ರಾಯಲ್ಸ್ ವಿರುದ್ಧ ಗೆದ್ದ ಸನ್ ರೈಸರ್ಸ್

ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ, ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 11 ರನ್ ಅಂತರದ ರೋಚಕ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್ ರೈಸರ್ಸ್ 20 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಮೊತ್ತ ಕಲೆಹಾಕಿತು. ಸನ್ ರೈಸರ್ಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ 63 ಹಾಗೂ ಅಲೆಕ್ಸ್ ಹೇಲ್ಸ್ 45 ರನ್ ಗಳಿಸಿದರು.

ಗುರಿಯನ್ನು ಬೆನ್ನತ್ತಿದ ರಾಯಲ್ಸ್ 20 ಓವರ್ ಗಳ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 140 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಯಲ್ಸ್ ನಾಯಕ ಅಜಿಂಕ್ಯ ರಹಾನೆ 65 ಹಾಗೂ ಸಂಜು ಸ್ಯಾಮ್ಸನ್ 40 ರನ್ ಗಳಿಸಿದರು. ಸನ್ ರೈಸರ್ಸ್ ಪರವಾಗಿ ಸಿದ್ಧಾರ್ಥ್ ಕೌಲ್ 2, ರಾಶಿದ್ ಖಾನ್ 1 ಹಾಗೂ ಸಂದೀಪ್ ಶರ್ಮಾ 1 ವಿಕೆಟ್ ಪಡೆದರು.

Leave a Reply

Your email address will not be published.

Social Media Auto Publish Powered By : XYZScripts.com