ಗೆಳೆಯನ ಗೆಲುವಿಗೆ ಶ್ರಮಿಸುತ್ತಿದ್ದ ಜನಾರ್ಧನ ರೆಡ್ಡಿ ವಿರುದ್ಧ ದಾಖಲಾಯ್ತು ದೂರು !

ಬಳ್ಳಾರಿ : ಚುನಾವಣಾ ಹೊಸ್ತಿಲಲ್ಲೇ  ಸ್ನೇಹಿತನ ಗೆಲುವಿಗಾಗಿ ಶ್ರಮ ಪಡುತ್ತಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮಾಜಿ ಕಾರ್ಪೋರೇಟರ್ ಪದ್ಮಾವತಿ ಯಾದವ್ ಕೊಲೆ ಪ್ರಕರಣದಲ್ಲಿ ಜನಾರ್ದನರೆಡ್ಡಿ ಹೆಸರು ತಳಕು ಹಾಕಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ ರೆಡ್ಡಿ ಕೈವಾಡವಿದೆ. ಸಾಕ್ಷಿ ತಿದ್ದುಪಡಿ ಮಾಡಿರುವ ಅನುಮಾನವಿದೆ ಎಂದು ದೂರು ದಾಖಲಿಸಲಾಗಿದೆ.

ಅಂದಿನ ಕೆಲ ಪೊಲೀಸ್ ಅಧಿಕಾರಿಗಳು ಕೂಡ ಕೊಲೆ ಪ್ರಕರಣ ಸಿ ರಿಪೋರ್ಟ್ ಹಾಕಲು ಕುಮ್ಮಕ್ಕು ನೀಡಿದ್ದಾರೆ. ಅಂದಿನ ಡಿಜಿ ಶಂಕರ್ ಬಿದರಿ ಮತ್ತು ತಂಡ ಸಿ ರಿಪೋರ್ಟ್ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ ಅನ್ನೋ ಆರೋಪಗಳು ಕೇಳಿಬಂದಿದೆ.  ಈ ಕುರಿತು ಪದ್ಮಾವತಿ ಯಾದವ್ ಸಹೋದರ ಸುಬ್ಬರಾಯುಡು ಏ.30 ರಂದು ಬಳ್ಳಾರಿ ಎಸ್ಪಿ ಅರುಣ್ ರಂಗರಾಜನ್ ಅವರಿಗೆ ದೂರು ಸಲ್ಲಿಸಿದ್ದಾರೆ.

2010 ಫೆ.4 ರಂದು ಪದ್ಮಾವತಿ ಯಾದವ್ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕೊಲೆ ಆರೋಪ ಕೇಳಿ ಬಂದಿತ್ತು. 2016 ಸೆಪ್ಟೆಂಬರ್ ನಲ್ಲಿ ಬಳ್ಳಾರಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಸಿ ರಿಪೋರ್ಟ್ ಸಲ್ಲಿಸಿದ್ದರು. ಈಗ ಈ ಪ್ರಕರಣ ರೆಡ್ಡಿಗೆ ಉರುಳಾಗಿದೆ.

One thought on “ಗೆಳೆಯನ ಗೆಲುವಿಗೆ ಶ್ರಮಿಸುತ್ತಿದ್ದ ಜನಾರ್ಧನ ರೆಡ್ಡಿ ವಿರುದ್ಧ ದಾಖಲಾಯ್ತು ದೂರು !

Leave a Reply

Your email address will not be published.

Social Media Auto Publish Powered By : XYZScripts.com