ಕಥುವಾ ಅತ್ಯಾಚಾರ ಪ್ರಕರಣ ಸಣ್ಣ ಘಟನೆ, ಅದಕ್ಕೆ ಹೆಚ್ಚು ಮಹತ್ವ ಕೊಡಬೇಡಿ : BJP ನಾಯಕ !

 ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಸೋಮವಾರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಕವಿಂದರ್‌ ಗುಪ್ತಾ ಅಧಿಕಾರ ಸ್ವೀಕರಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಕವಿಂದರ್‌ ಗುಪ್ತಾ ಸುದ್ದಿಯಾಗಿದ್ದು, ಕಥುವಾದಲ್ಲಿ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಣ್ಣ ಘಟನೆ ಅದಕ್ಕೆ ಹೆಚ್ಚು ಮಹತ್ವ ಕೊಡಬೇಡಿ ಎಂದಿದ್ದಾರೆ.
ಕಥುವಾದಲ್ಲಿ ನಡೆದಿರುವುದು ಸಣ್ಣ ಘಟನೆ. ಈ ರೀತಿಯ ಘಟನೆಗಳು ನಡೆಯಬಾರದು. ಸಂತ್ರಸ್ತೆಗೆ ನ್ಯಾಯ ಸಿಗಬೇಕು. ಆದರೆ ಇಂತಹ ಘಟನೆಗಳಿಗೆ ಪ್ರಾಮುಖ್ಯತೆ ನೀಡಬಾರದು ಎಂದಿದ್ದಾರೆ.
ಕವಿಂದರ್‌ ಹೇಳಿಕೆಗೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಉಪಮುಖ್ಯಮಂತ್ರಿ ವಿರುದ್ದ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

 

Leave a Reply

Your email address will not be published.

Social Media Auto Publish Powered By : XYZScripts.com