ಸಿ-ಫೋರ್‌ ಚುನಾವಣಾ ಸಮೀಕ್ಷೆ ಬಹಿರಂಗ : ಯಾರಿಗೆ ಸಿಗಲಿದೆ ಸ್ಪಷ್ಟ ಬಹುಮತ…ಇಲ್ಲಿದೆ ಡಿಟೇಲ್ಸ್‌

ಕರ್ನಾಟಕ  ವಿಧಾನಸಭಾ ಚುನಾವಣೆ  ಹತ್ತಿರವಾಗುತ್ತಿದ್ದಂತೆ, ಅಭ್ಯರ್ಥಿಗಲ ಎದೆಬಡಿತ ಜಾಸ್ತಿಯಾಗತೊಡಗಿದೆ. ಅಲ್ಲದೆ ಸಮೀಕ್ಷೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

ಸದ್ಯ ಸಿ-ಫೋರ್‌ ಸಂಸ್ಥೆ ತನ್ನ ಎರಡನೇ ಸಮೀಕ್ಷೆಯನ್ನು ಬಹಿರಂಗಪಡಿಸಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ. ಅಲ್ಲದೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದಿದೆ.

ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‌ 118-128 ಸ್ಥಾನಗಳನ್ನು ಗೆಲ್ಲಲಿದ್ದು, ಸ್ಪಷ್ಟ ಬಹುಮತ ಸಿಗಲಿದೆಯಂತೆ.

ಇನ್ನು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ 63-73 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದು, ಜೆಡಿಎಸ್‌ 29ರಿಂದ 36 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸಿ ಫೋರ್‌ ಸಮೀಕ್ಷೆ ಹೇಳಿದೆ.

Leave a Reply

Your email address will not be published.

Social Media Auto Publish Powered By : XYZScripts.com