IPL : ಬೆಂಗಳೂರಿನಲ್ಲಿಂದು MI-RCB ಪಂದ್ಯ : ಜಯದ ಹಾದಿಗೆ ಮರಳುವುದೇ ಕೊಹ್ಲಿ ಪಡೆ..?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಐಪಿಎಲ್ ಟಿ-20 ನಡೆಯಲಿದೆ. ಕಳೆದ ಪಂದ್ಯದಲ್ಲಿ ಬಲಿಷ್ಟ ಚೆನ್ನೈ ತಂಡವನ್ನು ಸೋಲಿಸಿರುವ ಮುಂಬೈ ಇಂಡಿಯನ್ಸ್ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಇನ್ನೊಂದೆಡೆ ಸತತ ಸೋಲುಗಳಿಂದ ಕಂಗಟ್ಟಿರುವ ಆರ್ ಸಿಬಿ ಗೆಲುವಿನ ಟ್ರ್ಯಾಕ್ ಗೆ ಮರಳಲು ಪ್ರಯತ್ನಿಸಲಿದೆ.

ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ತವರಿನಲ್ಲಿ ಮುಖಭಂಗ ಅನುಭವಿಸಿದ್ದ ಆರ್ ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆ ಕಾಡುತ್ತಿದೆ. ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ತೋರಿ ದೊಡ್ಡ ಮೊತ್ತ ಕಲೆಹಾಕಿದರೂ, ಎದುರಾಳಿ ಬ್ಯಾಟ್ಸಮನ್ ಗಳನ್ನು ಕಟ್ಟಿಹಾಕುವ ಬೌಲರ್ ಗಳ ಕೊರತೆ ಆರ್ ಸಿಬಿ ತಂಡದಲ್ಲಿ ಎದ್ದು ಕಾಣುತ್ತಿದೆ.

ಆಡಿರುವ 7 ಪಂದ್ಯಗಳಲ್ಲಿ 5 ರಲ್ಲಿ ಸೋಲನ್ನು ಕಂಡಿರುವ ಆರ್ ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಈ ಬಾರಿ ಐಪಿಎಲ್ ಟೂರ್ನಿ ಗೆಲ್ಲುವ ಕನಸು ಜೀವಂತವಾಗಿರಬೇಕಾದರೆ, ಗೆಲುವಿನ ಲಯ ಕಂಡುಕೊಳ್ಳುವುದು ಅತ್ಯವಶ್ಯಕವಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com