KRS ನಲ್ಲಿ ಭಾರೀ ಮಳೆಗೆ ಮೂವರು ಪ್ರವಾಸಿಗರ ಸಾವು : ಎರಡು ದಿನಗಳ ಕಾಲ ಪ್ರವೇಶ ನಿಷೇಧ

ಮಂಡ್ಯ : ಜಿಲ್ಲೆಯಲ್ಲಿ ಮಳೆ, ಬಿರುಗಾಳಿಯ ಆರ್ಭಟ ಜೋರಾಗಿದ್ದು, ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಕೆಆರ್‌ಎಸ್‌ನಲ್ಲಿ ಮರಗಳು ಧರೆಗುರುಳಿದ್ದು ಪರಿಣಾಮ ಮೂವರು ಪ್ರವಾಸಿಗರು ಸಾವಿಗೀಡಾಗಿದ್ದಾರೆ.

ಈ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಕೆಆರ್‌ಎಸ್‌ಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಶ್ವವಿಖ್ಯಾತ ಕೆ.ಆರ್.ಎಸ್. ಬೃಂದಾವನದಲ್ಲಿ ಇದೇ ಮೊದಲ ಬಾರಿಗೆ ಇಂತಹ ದುರಂತ ನಡೆದಿದೆ. ಬಿರುಗಾಳಿ ಸಹಿತ ಭಾರೀ ಮಳೆಯಾದ ಕಾರಣ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಈ ವೇಳೆ ಪ್ರವಾಸಿಗರು ಮರದಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಿದ್ದ ಮರಗಳ ತೆರವು ಕಾರ್ಯಾಚರಣೆ ಕೈಗೊಂಡ ಹಿನ್ನಲೆಯಲ್ಲಿ 2 ದಿನಗಳ ಕಾಲ ಬೃಂದಾವನಕ್ಕೆ ಪ್ರವಾಸಿಗರಿಗೆ ಪ್ರವೇಶವಿರುವುದಿಲ್ಲ ಎನ್ನಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com