ಉ.ಪ್ರ, ರಾಜಸ್ಥಾನದಲ್ಲಿ ಧೂಳಿನ ಬಿರುಗಾಳಿ ಸಹಿತ ಭಾರೀ ಮಳೆ : ಮೃತರ ಸಂಖ್ಯೆ 97ಕ್ಕೆ ಏರಿಕೆ

ದೆಹಲಿ : ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಭಾರೀ ಗಾಳಿ, ಮಳೆ, ಧೂಳಿನ ಚಂಡಮಾರುತ ಎದ್ದಿದ್ದು, ಇದಕ್ಕೆ 97 ಮಂದಿ ಬಲಿಯಾಗಿದ್ದಾರೆ.

ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಚಂಡಮಾರುತಕ್ಕೆ ಎರಡೂ ರಾಜ್ಯಗಳು ತತ್ತರಿಸಿವೆ . ನೂರಾರು ಮನೆಗಳು ಕುಸಿದಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಚಂಡಮಾರುತದ ಭೀಕರತೆ ಹೆಚ್ಚಿದ್ದು,  ಈ ಪೈಕಿ ಆಗ್ರಾ ಪ್ರದೇಶದಲ್ಲೇ 43 ಮಂದಿ ಪ್ರಾಣ ಬಿಟ್ಟಿದ್ದಾರೆ. 160ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಆಗ್ರಾವೊಂದರಲ್ಲೇ  ಬುಧವಾರ ರಾತ್ರಿ 48.2 ಮಿ.ಮೀಟರ್‌ನಷ್ಟು ಮಳೆಯಾಗಿದೆ. ಜೊತೆಗೆ ಗಂಟೆಗೆ 126 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿರುವುದಾಗಿ ಹವಾಮಾನ ಇಲಾಖೆ ಹೇಳಿದೆ. ಆಗ್ರಾದಲ್ಲಿ ಮೃತರ ಕುಟುಂಬಕ್ಕೆ ತಲಾ  4 ಲಕ್ಷ ಪರಿಹಾರವನ್ನು ಜಿಲ್ಲಾಡಳಿತ ಘೋಷಿಸಿದೆ.
ರಾಜಸ್ಥಾನದ ಬಿಕನೇರ್‌ನಲ್ಲಿ ಧೂಳಿನ ಚಂಡಮಾರುತಕ್ಕೆ 27 ಮಂದಿ ಬಲಿಯಾಗಿದ್ದಾರೆ ಹಾಗೂ 100ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂರಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ವಿದ್ಯುತ್‌ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ 4 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ಪರಿಹಾರವನ್ನು ರಾಜಸ್ಥಾನ ಸಿಎಂ ವಸುಂಧರಾ ರಾಜೇ ಘೋಷಿಸಿದ್ದಾರೆ.

2 thoughts on “ಉ.ಪ್ರ, ರಾಜಸ್ಥಾನದಲ್ಲಿ ಧೂಳಿನ ಬಿರುಗಾಳಿ ಸಹಿತ ಭಾರೀ ಮಳೆ : ಮೃತರ ಸಂಖ್ಯೆ 97ಕ್ಕೆ ಏರಿಕೆ

Leave a Reply

Your email address will not be published.

Social Media Auto Publish Powered By : XYZScripts.com