Cricket : ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ನೇಮಕ

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟ್ಸಮನ್ ಜಸ್ಟಿನ್ ಲ್ಯಾಂಗರ್ ಅವರನ್ನು, ಆಸೀ ತಂಡದ ಮುಖ್ಯ ಕೋಚ್ ಆಗಿ ಗುರುವಾರ ನೇಮಕ ಮಾಡಲಾಗಿದೆ. ಮಾಜಿ ಕೋಚ್ ಡಾರೆನ್ ಲೆಹ್ಮನ್ ಸ್ಥಾನವನ್ನು ತುಂಬಲಿರುವ ಲ್ಯಾಂಗರ್ ಟೆಸ್ಟ್, ಏಕದಿನ ಹಾಗೂ ಟಿ20 ಮೂರು ಮಾದರಿಗಳಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ಟೆಸ್ಟ್ ನಲ್ಲಿ ನಡೆದಿದ್ದ ಬಾಲ್ ಟ್ಯಾಂಪರಿಂಗ್ ಪ್ರಕರಣ ಆಸ್ಟ್ರೇಲಿಯಾ ಕ್ರಿಕೆಟ್ ಅನ್ನು ಸಂಶಯದಿಂದ ನೋಡುವಂತೆ ಮಾಡಿತ್ತು. ಪ್ರಕರಣದ ಹೊಣೆಯನ್ನು ಹೊತ್ತು ಉಪ ನಾಯಕ ಡೇವಿಡ್ ವಾರ್ನರ್, ನಾಯಕ ಸ್ಟೀವ್ ಸ್ಮಿತ್ ಸ್ಥಾನದಿಂದ ಕೆಳಗಿಳಿದಿದ್ದರು.

ಟೆಸ್ಟ್ ಸರಣಿ ಮುಗಿದ ಬಳಿಕ ಡಾರೆನ್ ಲೆಹ್ಮನ್ ಕೂಡ ತಮ್ಮ ಮುಖ್ಯ ಕೋಚ್ ಹುದ್ದೆಯನ್ನು ತ್ಯಜಿಸಿದ್ದರು. ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಅವರಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ 1 ವರ್ಷ ನಿಷೇಧ ಹೇರಿತ್ತು.

Leave a Reply

Your email address will not be published.