ತಮಿಳುನಾಡಿಗೆ ನೀರು ಬಿಟ್ಟರೆ ಜನ ಸಿದ್ದರಾಮಯ್ಯನ ರಕ್ತ ಕುಡಿತಾರೆ ಎಂದ ಮಾಜಿ ಸಂಸದ

ಮಂಡ್ಯ : ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕದ ಜನರು ಸಿದ್ದರಾಮಯ್ಯ ಅವರ ರಕ್ತ ಕುಡಿಯುತ್ತಾರೆ ಎಂದು ಮಂಡ್ಯದ ಮಾಜಿ ಸಂಸದ ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಆರ್’ಎಸ್ ಅಣೆಕಟ್ಟೆಯಲ್ಲೆ ನೀರಿಲ್ಲ ಈಗಾಗಲೆ ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಪೂರಕವಾದ ಬೆಳೆಗಳು ನೀರಿಲ್ಲದೆ ಒಣಗುವಂತ ಪರಿಸ್ಥಿತಿ ಬಂದಿದೆ. ಹೀಗಿರುವಾಗ ತಮಿಳುನಾಡಿಗೆ ನೀರುಬಿಡಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ರಾಜ್ಯಸರ್ಕಾರ ಸುಪ್ರೀಂ ಕೋರ್ಟ್‌ಗೆ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿಸಬೇಕು. ಒಂದು ವೇಳೆ‌ ತಮಿಳುನಾಡಿಗೆ ನೀರು ಬಿಟ್ಟಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com