ಕಾಂಗ್ರೆಸ್‌ ಮೇಲೆ ಮುನಿಸಿಕೊಂಡ ನಟಿ : ಕಮಲ ಹಿಡಿಯುವ ಸಲುವಾಗಿ BSY ಭೇಟಿಯಾದ ಭಾವನಾ

ಬೆಂಗಳೂರು : ಇಷ್ಟು ವರ್ಷ ಕಾಂಗ್ರೆಸ್‌ ಪಕ್ಷದಲ್ಲಿದ್ದ ನಟಿ ಭಾವನಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಲು ಚಿಂತಿಸಿರುವುದಾಗಿ ತಿಳಿದುಬಂದಿದೆ.

ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಭಾವನಾ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲೇ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ಮೂಲಗಳು ತಿಳಿಸಿವೆ.

ಭಾವನಾ ಚಿತ್ರದುರ್ಗದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು, ಆದರೆ ಟಿಕೆಟ್‌ ಸಿಗದ ಹಿನ್ನಲೆಯಲ್ಲಿ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದು, ಈಗ ಏಕಾಏಕಿ ಬಿಜೆಪಿ ಸೇರುವುದಾಗಿ ಕೇಳಿಬರುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com