ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ : ಖಡಕ್‌ ಸೂಚನೆ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದಂತೆ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ವಾರ್ನಿಂಗ್‌ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ.

ಜಾಮೀನಿನ ಮೇಲೆ ಹೊರಗಿರುವ  ಜನಾರ್ಧನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದು, ರೆಡ್ಡಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದಿದೆ.
ಸಹೋದರ ಸೋಮಶೇಖರ ರೆಡ್ಡಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಅವರ ಪರ ಪ್ರಚಾರ ಮಾಡಲು  ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ರೆಡ್ಡಿ ಮನವಿ ಮಾಡಿದ್ದರು. ಈ ಕುರಿತು ರೆಡ್ಡಿ ಪರ ವಕೀಲರು ಜನಾರ್ಧನ ರೆಡ್ಡಿ ಮತ ಚಲಾಯಿಸಬೇಕು. ಆದ ಕಾರಣ ಷರತ್ತುಗಳನ್ನು ಸಡಿಲಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ರೆಡ್ಡಿಯವರ ಅರ್ಜಿಯನ್ನು ತಿರಸ್ಕರಿಸಿದೆ.

Leave a Reply

Your email address will not be published.

Social Media Auto Publish Powered By : XYZScripts.com