ನಟ ಪ್ರಕಾಶ್‌ ರೈ, ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ವಿರುದ್ದ ದಾಖಲಾಯ್ತು ಎಫ್‌ಐಆರ್‌

ಚಿಕ್ಕಮಗಳೂರು : ಜಿಲ್ಲಾಡಳಿತದ ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರೈ ಹಾಗೂ ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ವಿರುದ್ದ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಹಾಗೂ ಸ್ವಾಭಿಮಾನಿ ಸಮಾವೇಶವನ್ನು ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮವನ್ನು ಕುವೆಂಪು ಕಲಾ ಮಂದಿರದಲ್ಲಿ ನಡೆಸಲು ಅನುಮತಿ ಕೋರಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ  ಚಿಕ್ಕಮಗಳೂರಿನ ಅಂಡೇ ಛತ್ರದ ಬಳಿ ಕಾರ್ಯಕ್ರಮ ನಡೆಸಿದ್ದರು.

ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದ್ದಕ್ಕಾಗಿ ನಟ ಪ್ರಕಾಶ್‌ ರೈ, ಶಾಸಕ ಮೇವಾನಿ ಸೇರಿದಂತೆ 15 ಮಂದಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 143, 147, 341, 188, 149 (37,109)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Leave a Reply

Your email address will not be published.

Social Media Auto Publish Powered By : XYZScripts.com